
ಹುಬ್ಬಳ್ಳಿ: ಇತ್ತೀಚೆಗೆ ನಗರದ ವೀರಾಪುರ ಓಣಿಯಲ್ಲಿ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಏಕಾಏಕಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬಾಕೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ಇದರಿಂದ ಬೇಸತ್ತ ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮೇ 18 ರಂದು ಅಂಜಲಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಂಜಲಿ ಸಹೋದರಿ ಯಶೋಧಾ ಅವರು, ಮನೆಗೆ ಮರಳಿದ ಬಳಿಕ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.