24.9 C
Udupi
Friday, June 5, 2026
spot_img
spot_img
HomeBlogಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಡಿ.ಎನ್. ಅವರು ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿಶೇಷ ಅತಿಥಿಗಳಾಗಿ ಕಾರ್ಕಳ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ರವೀಂದ್ರ ಪಿ. ಆಚಾರ್ಯ ಹಾಗೂ ಕಾರ್ಕಳ ಸಾಮಾಜಿಕ ಅರಣ್ಯ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು.

ಅತಿಥಿಗಳು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ, ಅರಣ್ಯಗಳ ಮಹತ್ವ ಹಾಗೂ ಮರಗಳ ಬೆಳವಣಿಗೆಯ ಅಗತ್ಯತೆಯ ಕುರಿತು ಮಾರ್ಗದರ್ಶನ ನೀಡಿದರು. ಪ್ರತಿಯೊಬ್ಬರೂ ಕನಿಷ್ಠ ಒಂದು ಮರವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಸಂತೋಷ್ ಅವರು ಮಕ್ಕಳಿಗೆ ಪರಿಸರದ ಮಹತ್ವದ ಕುರಿತು ತಿಳಿಸಿ, ಪರಿಸರದಲ್ಲಿ ಎಲ್ಲಾ ಜೀವಿಗಳಿಗೂ ಬದುಕುವ ಸಮಾನ ಹಕ್ಕಿದೆ ಎಂದು ಹೇಳಿದರು. ಅರಣ್ಯ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಉಪ ಪ್ರಾಂಶುಪಾಲೆ ಶ್ರೀಮತಿ ಆರತಿ ಅವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪರಿಸರ ಜಾಗೃತಿಯ ಸಂದೇಶ ಸಾರುವ ಕಿರು ಪ್ರಹಸನವನ್ನು ಪ್ರದರ್ಶಿಸಿ, ಪರಿಸರ ಸಂರಕ್ಷಣೆಯ ಕುರಿತ ಸಮೂಹ ಗೀತೆಯನ್ನು ಹಾಡಿದರು. ಈ ಸಂದರ್ಭದಲ್ಲಿ ಸಸಿ ನೆಡುವ ಕಾರ್ಯಕ್ರಮವೂ ನಡೆಯಿತು.

ಕಾರ್ಯಕ್ರಮದ ಸ್ವಾಗತ, ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಸಮಾಜ ವಿಜ್ಞಾನ ಶಿಕ್ಷಕಿ ಆಶಾ ಜ್ಯೋತಿ ಅವರು ನೆರವೇರಿಸಿದರು. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ ಈ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಸಂಕಲ್ಪದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page