
ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಚಾರಿ ಪೀಠವು ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಿಲೀಪ್ ಹೆಗ್ಡೆ (28) ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.
ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ ಅವರು ಆರೋಪಿಯ ವಿರುದ್ಧದ ಚಾರ್ಜ್ಶೀಟ್ನಲ್ಲಿರುವ ಗಂಭೀರ ಅಂಶಗಳನ್ನು ಪರಿಗಣಿಸಿ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.
ಈ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪ್ರತಿಮಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಮಾ.10ಕ್ಕೆ ದಿನಾಂಕ ನಿಗದಿಪಡಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.






















































