33.4 C
Udupi
Thursday, April 30, 2026
spot_img
spot_img
HomeBlogಅಡಿಕೆ ಕ್ಯಾನ್ಸರ್‌ಕಾರಕ ಎಂದು ವರದಿ ಬಿಡುಗಡೆ ಮಾಡಿದ ಡಬ್ಲ್ಯುಎಚ್‌ಒ..!

ಅಡಿಕೆ ಕ್ಯಾನ್ಸರ್‌ಕಾರಕ ಎಂದು ವರದಿ ಬಿಡುಗಡೆ ಮಾಡಿದ ಡಬ್ಲ್ಯುಎಚ್‌ಒ..!

ಮಂಗಳೂರು : ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಅಂಗಸಂಸ್ಥೆಯೊಂದು ಅಡಿಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್‌ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ಇತ್ತೀಚೆಗೆ ವರದಿ ನೀಡಿದ್ದು ಈ ಮೂಲಕ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ದಕ್ಕಿದೆ.

ಈ ವರದಿಯು ಅಡಿಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಇದೀಗ ತಂಬಾಕು ಮಾದರಿಯಲ್ಲೇ ಅಡಕೆ ಬೆಳೆ ನಿಯಂತ್ರಣ ಉಪಕ್ರಮಗಳಿಗೂ ಕಾರಣವಾಗುವ ಆತಂಕದಿಂದ ಬೆಳೆಗಾರರು ಸಂಕಟ ಪಡುವಂತಾಗಿದೆ.

2024 ಅ. 9ರಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಂಗಸಂಸ್ಥೆ ಇಂಟರ್‌ ನ್ಯಾಷನಲ್‌ ಏಜೆನ್ಸಿ ಫಾರ್‌ ರಿಸರ್ಚ್ ಆ್ಯಂಡ್‌ ಕ್ಯಾನ್ಸರ್‌(ಐಎಆರ್‌ಸಿ) ಬಿಡುಗಡೆ ಮಾಡಿದ ವರದಿಯಲ್ಲಿ ಮತ್ತೆ ಅಡಕೆಯನ್ನು ಕ್ಯಾನ್ಸರ್‌ ಕಾರಕ ಎಂದು ಹೇಳಲಾಗಿದೆ. ಐಎಆರ್‌ಸಿ ಸಂಸ್ಥೆ ಬಾಯಿ ಕ್ಯಾನ್ಸರ್‌ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ಪ್ರತಿ ಐದು ವರ್ಷಕ್ಕೊಮ್ಮೆ ವಿಶ್ವ ಕ್ಯಾನ್ಸರ್‌ ವರದಿ ಪ್ರಕಟಿಸುತ್ತದೆ. ಈ ಹಿಂದಿನ ಐಎಆರ್‌ಸಿಯ ವರದಿಗಳಲ್ಲೂ ಅಡಕೆ ಕ್ಯಾನ್ಸರ್‌ಕಾರಕ ಎಂದೇ ಉಲ್ಲೇಖವಾಗಿದ್ದರೂ ಈಗಿನ ವರದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ.

ಐಎಆರ್‌ಸಿ ವರದಿಯಲ್ಲಿ ತಂಬಾಕು ಮಿಶ್ರಿತ ಅಡಕೆ ಮಾತ್ರವಲ್ಲ, ನೇರವಾಗಿ ಅಡಕೆ ಬೆಳೆಯನ್ನೇ ನಿಯಂತ್ರಿಸುವ ಪ್ರಸ್ತಾಪವಿದ್ದು ಹೊಗೆ ರಹಿತ ತಂಬಾಕು(ತಿಂದು ಉಗುಳುವ) ಮತ್ತು ಅಡಿಕೆ ಬಳಕೆಗೆ ಕಡಿವಾಣ ಹಾಕುವ ಮೂಲಕ ವಿಶ್ವದ ಮೂರನೇ ಒಂದರಷ್ಟು ಬಾಯಿ ಕ್ಯಾನ್ಸರ್‌ ತಡೆಯಬಹುದು ಎಂಬ ವರದಿಯಲ್ಲಿ ಉಲ್ಲೇಖಿಸಿದೆ.

ಜಾಗತಿಕವಾಗಿ 300 ಮಿಲಿಯನ್‌ ಮಂದಿ ಹೊಗೆರಹಿತ ತಂಬಾಕು ದಾಸರಾಗಿದ್ದು, 600 ಮಿಲಿಯನ್‌ ಮಂದಿ ಅಡಿಕೆ ಬಳಸುತ್ತಾರೆ. ದಕ್ಷಿಣ ಮಧ್ಯ ಏಷ್ಯಾ, ಆಗ್ನೇಯ ಏಷ್ಯಾ ಮತ್ತು ಇತರೆ ಹೆಚ್ಚಿನ ದೇಶಗಳಲ್ಲಿ ಅಡಕೆ ಬಳಕೆಯಲ್ಲಿದೆ. ಹೊಗೆ ರಹಿತ ತಂಬಾಕು ಮತ್ತು ಅಡಿಕೆ ಉತ್ಪನ್ನಗಳು ಗ್ರಾಹಕರಿಗೆ ವಿವಿಧ ರೂಪದಲ್ಲಿ ಲಭ್ಯವಿರುತ್ತವೆ.

ತಂಬಾಕು, ಗುಟ್ಕಾ ಹಾಗೂ ಅಡಕೆಯಂಥ ಹೊಗೆರಹಿತ ತಂಬಾಕು ಉತ್ಪನ್ನಗಳ ಹೆಚ್ಚಿನ ಬಳಕೆಯಿಂದ ಏಷ್ಯಾದ ದೇಶಗಳಲ್ಲಿ ಭಾರತ ಅತೀ ಹೆಚ್ಚು ಬಾಯಿ ಕ್ಯಾನ್ಸರ್‌ ಪ್ರಕರಣ ಹೊಂದಿದೆ ಎಂದು ಕ್ಯಾನ್ಸರ್‌ ವಿಭಾಗದ ವಿಜ್ಞಾನಿ ಡಾ.ಹ್ಯಾರಿಯೆಟ್‌ ರುಮ್ಗೇ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಹೊಗೆರಹಿತ ತಂಬಾಕು ಮತ್ತು ಅಡಿಕೆ ಬಳಕೆಯಿಂದ ಉಂಟಾಗುವ ಎಲ್ಲ ಬಾಯಿ ಕ್ಯಾನ್ಸರ್‌ ಪ್ರಕರಣಗಳಲ್ಲಿ ಭಾರತದಲ್ಲಿ 83,400, ಬಾಂಗ್ಲಾದೇಶ 9,700, ಪಾಕಿಸ್ತಾನ 8,900, ಚೀನಾ 3,200, ಮ್ಯಾನ್ಮಾರ್‌ 1,600, ಶ್ರೀಲಂಕಾ 1,300, ಇಂಡೋನೇಷ್ಯಾ 990 ಹಾಗೂ ಥಾಯ್‌ಲ್ಯಾಂಡ್‌ನಲ್ಲಿ 785 ಕೇಸ್‌ಗಳು ವರದಿಯಾಗಿದೆ.

ಅಡಿಕೆ ಕ್ಯಾನ್ಸರ್‌ಕಾರಕ ಎಂಬ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕೆಲ ವರ್ಷಗಳಿಂದ ವಿಚಾರಣೆ ನಡೆಯುತ್ತಲಿದ್ದು 1998 ರಿಂದಲೂ ಅಂತಾರಾಷ್ಟ್ರೀಯ ಸಂಶೋಧನಾ ಪತ್ರಿಕೆಗಳಲ್ಲಿ ಅಡಕೆ ಹಾನಿಕಾರಕ ಎಂದೇ ಉಲ್ಲೇಖಿಸಲಾಗುತ್ತಿದೆ. ಅಡಿಕೆ ಆರೋಗ್ಯದಾಯಕ, ಸಾಂಪ್ರದಾಯಿಕವಾಗಿಯೂ ಅಡಿಕೆ ಬಳಸುತ್ತಾರೆ. ಮೌಲ್ಯವರ್ಧಿತ ಉತ್ಪನ್ನವಾಗಿಯೂ ಉಪಯೋಗಿಸುತ್ತಾರೆ ಎಂಬುದನ್ನು ಆಧಾರ ಸಹಿತ ಸಾಬೀತುಪಡಿಸಲಾಗಿದೆ. ಇದರ ಜತೆಗೆ ಅಡಕೆ ಕ್ಯಾನ್ಸರ್‌ಕಾರಕ ಅಲ್ಲ ಎಂದು ಮಾರುಕಟ್ಟೆ ಅಧ್ಯಯನ ವರದಿಗಳೂ ಅಭಿಪ್ರಾಯ ಮಂಡಿಸಿದ್ದರೂ ಅದು ಐಎಆರ್‌ಸಿ ತಲುಪಿಲ್ಲ. ಹೀಗಾಗಿ ಅಡಕೆ ಕ್ಯಾನ್ಸರ್‌ಕಾರಕ ಅಲ್ಲ ಎಂದು ಸಾಬೀತುಪಡಿಸಲು ಸಾಧ್ಯವಾಗದೇ ಇರುವುದು ಈಗ ಅಡಿಕೆ ಬೆಳೆ ಮೇಲೆ ನಿಷೇಧದ ತೂಗುಗತ್ತಿ ಇದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page