
ಬೆಂಗಳೂರು: ಮಕ್ಕಳ ಪೋಷಕರು ನಗರದಲ್ಲಿ ಖಾಸಗಿ ಶಾಲೆಗಳ ಪ್ರವೇಶಾತಿ ಶುಲ್ಕವನ್ನು ಅವೈಜ್ಞಾನಿಕವಾಗಿ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು ಈ ಕುರಿತು ಪ್ರತಿಕ್ರಿಯಿಸಿದ ಆಯೋಗವು ಅತಿಯಾದ ಬೋಧನಾ ಶುಲ್ಕವನ್ನು ಕಡಿತಗೊಳಿಸುವಂತೆ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದೆ.
ಸದ್ಯ ಶುಲ್ಕ ಹೆಚ್ಚಳ ಮಾಡಿದ ಶಾಲೆಗಳಿಗೆ ನೋಟಿಸ್ ನೀಡಲಾಗಿದ್ದು ದೂರಿನನ್ವಯ ಪ್ರಕರಣದ ಗಂಭೀರತೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸೂಕ್ತ ದಾಖಲೆಯೊಂದಿಗೆ ಶಾಲೆಯು ಮೂರು ದಿನಗಳ ಒಳಗಾಗಿ ಉತ್ತರ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದೆ.



