
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ವಿಚಾರ ಮುಂದುವರೆದಿದ್ದು ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್ ‘ಪಕ್ಷವು ತಾಳ್ಮೆಯಿಂದ ಇರಲು ಹೇಳಿದ್ದು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಾಹುಲ್ ಗಾಂಧಿಯವರು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದು ಪಕ್ಷದ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಅಧಿಕಾರ ಸಿಗುವುದು ಸುಲಭವಲ್ಲ, ರಾಜಕೀಯದಲ್ಲಿ ಅಧಿಕಾರ ಮತ್ತು ತಾಳ್ಮೆ ಶಾಶ್ವತ ಅಲ್ಲ. ನಮ್ಮ ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ” ಎಂದು ಹೇಳಿದ್ದಾರೆ.








