
ರಾಮನಗರ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಯೋಜನೆಗಳಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾದರೆ, ಶಕ್ತಿ ಯೋಜನೆಯಲ್ಲಿ ಸರ್ಕಾರಿ ನೌಕರಿಯಲ್ಲಿರುವ ಮಹಿಳೆಯರು ಸಾರಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇಂತಹ ಕೆಲವು ಪ್ರಕರಣಗಳನ್ನು ಪರಿಶೀಲನೆ ಮಾಡುತ್ತಿದ್ದು, ಕೆಲವೊಂದು ಬದಲಾವಣೆ ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.






















































