
ಚಿಕ್ಕಮಗಳೂರು; ಕೊಪ್ಪ ತಾಲೂಕಿನ ಭುವನ ಪೇಟೆ ಸಮೀಪದ ಸಾಲುಮರ ಗ್ರಾಮದ ಯುವಕ ವಿಘ್ನೇಶ್ (18) ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ವಿಘ್ನೇಶ್ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ವ್ಯಾಸಂಗ ನಡೆಸುತ್ತಿದ್ದು, ಕಳೆದ ನಾಲ್ಕು ವರ್ಷಗಳ ಹಿಂದೆ, ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡಿದ್ದ.ಇದಕ್ಕಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇದೀಗ ಈ ವಿಚಾರಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.