
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ
ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ನೆಹರು ಯುವ ಕೇಂದ್ರ ಉಡುಪಿ, ಜೇಸಿಐ ಬೆಳ್ಮಣ್ಣು, ರೋಟರಿ
ಸಮುದಾಯದಳ ಕೆಮ್ಮಣ್ಣು – ನಿಟ್ಟೆ ಸಹಯೋಗದಲ್ಲಿ ಸಂಘದ ರಂಗಮAದಿರದ ಬಳಿ ಸಂಘದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆ ವಹಿಸಿ ಗಿಡ ನೆಡುವ ಮೂಲಕ
ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ, ಪೂರ್ವಾಧ್ಯಕ್ಷ ದಿಣೇಶ್ ಸುವರ್ಣ, ನಿಟ್ಟೆ ಕೆಮ್ಮಣ್ಣು ರೋಟರಿ ಸಮುದಾಯದಳದ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ
ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ,
ಸ್ಥಾಪಕಾಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ ಪೂರ್ವಾಧ್ಯಕ್ಷರುಗಳಾದ ರಘುವೀರ್ ಶೆಟ್ಟಿ
ಬೋಳ, ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ, ಉದಯ ಅಂಚನ್, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಕೋಶಾಧಿಕಾರಿ ಆರತಿ, ಸದಸ್ಯರಾದ ಹರೀಶ್ ಪೂಜಾರಿ, ಲೀಲಾ ಪೂಜಾರಿ, ಹರಿಣಿ ಪೂಜಾರಿ, ಪುಷ್ಪ ಕುಲಾಲ್, ಸುದರ್ಶನ್ ಕುಂದರ್, ಸುಲೋಚನಾ ಕೋಟ್ಯಾನ್. ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್, ಯೋಗೀಶ್ ಆಚಾರ್ಯ ಮೊದಲಾದವರಿದ್ದರು.