
ಬಾಗಲಕೋಟೆ: ಸೋಮವಾರ ಬಾದಾಮಿಯಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.
ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಅದರ ಬೆನ್ನೆಲ್ಲೇ ಗೃಹ ಸಚಿವರು ಬಹಿರಂಗವಾಗಿ ಈ ಹೇಳಿಕೆ ನೀಡಿದ್ದಾರೆ.
ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.






















































