
ಶ್ರಮ ಜೀವಿಗಳಗಿರುವ ಭೋವಿ ಸಮುದಾಯದ ಬಡ ಯುವತಿ ಒಬ್ಬಳಿಗೆ ಮತ್ತು ಬರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ ಇದೊಂದು ಪೈಶಾಚಿಕ ಕೃತ್ಯ ಎಂದು ಘಟನೆಯನ್ನು ಕಾರ್ಕಳ ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ ಯಶೋಧ ಶೆಟ್ಟಿ ರವರು ಖಂಡಿಸಿದ್ದಾರೆ.
ಯುವತಿಯನ್ನು ಕುಶಲಾಯಿಸಿ ಅಮಲು ಪದಾರ್ಥದೊಂದಿಗೆ ಕಾರಿನಲ್ಲಿ ಸುಮಾರು ದೂರ ಪಳ್ಳಿ ತನಕ ಕರೆದೊಯ್ದು ಕೃತ್ಯ ನಡೆಸಿದ್ದಾರೆ ಎಂದರೆ ಇದನ್ನು ಊಹಿಸಲು ಅಸಾಧ್ಯ ಇದೊಂದು ಪೂರ್ವಯೋಜಿತ ಕೃತ್ಯ ಎನ್ನುವ ಸಂದೇಹ ದಟ್ಟವಾಗಿ ಕಾಣುತ್ತದೆ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಬೇಕು ಈ ಮೂಲಕ ಪ್ರಕರಣ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಭೇದಿಸಬೇಕು ಸಂತ್ರಸ್ತ ಯುವತಿಯ ಆರೋಗ್ಯ ವೆಚ್ಚವನ್ನು ಸರಕಾರ ಬರಿಸಬೇಕು ಜಿಲ್ಲಾಡಳಿತ ಯುವತಿಗೆ ಮಾನಸಿಕ ಧೈರ್ಯ ತುಂಬಿ ಯುವತಿ ಮತ್ತು ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಇತ್ತೀಚಿನ ಹೆಣ್ಣು ಮಕ್ಕಳು ವಾಟ್ಸಪ್ ಇನ್ಸ್ಟಾಗ್ರಾಂ ಫೇಸ್ಬುಕ್ ಇಂತಹ ಸಾಮಾಜಿಕ ಜಾಲತಾಣಗಳಿಗೆ ಮಾರುಹೋಗದೆ ತಮ್ಮ ಭದ್ರತೆಯನ್ನು ತಾವೇ ಕಾಪಾಡಿಕೊಳ್ಳಬೇಕು ಈ ಕೃತ್ಯದಲ್ಲಿ ಭಾಗಿಯಾದವರಿಗೆ ಪೋಲಿಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು.













