“ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ” ಎಂದ ಪ್ರಧಾನಿ ಮೋದಿ

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಬಲ ಕಿವಿಗೆ ಗಾಯವಾಗಿದೆ.
ಡೊನಾಲ್ಡ್ ಟ್ರಂಪ್ ರ್ಯಾಲಿಯಲ್ಲಿ ಭಾಗವಹಿಸಿದ ಸಂದರ್ಭ, ಗುಂಡಿನ ದಾಳಿ ನಡೆದಿದ್ದು ರಕ್ಷಣಾ ತಂಡ ಕೂಡಲೇ ಕಾರ್ಯಪ್ರವೃತ್ತರಾಗಿ ಪ್ರತಿ ದಾಳಿ ನಡೆಸಿದ ಹಿನ್ನೆಲೆ ದಾಳಿಯಲ್ಲಿ ಶಂಕಿತ ಶೂಟರ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನು ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ, ತಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಎಂದು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.






