
ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್ ಜೂನ್ 1 ರ ವರೆಗೆ ಮಧ್ಯಂತರ ಜಾಮೀನು ನೀಡಿದೆ.
ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಸುಪ್ರೀಂ ಅನುಮತಿ ನೀಡಿದೆ,ಮಾರ್ಚ್ 21 ಕ್ಕೆ ಜಾರಿ ನಿರ್ದೇಶನಾಲಯ (ಇಡಿ)ಯಿಂದ ಬಂಧನಕ್ಕೊಳಗಾದ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದರು.
ಕೇಜ್ರಿವಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಮುಗಿಸಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ,ದೀಪಂಕರ್ ದತ್ತಾ ಅವರು ತೀರ್ಪು ಪ್ರಕಟಿಸಿದ್ದಾರೆ.
ಜೂನ್ 4 ರವರೆಗೆ (ಫಲಿತಾಂಶ ಪ್ರಕಟದವರೆಗೆ) ಜಾಮೀನು ನೀಡುವಂತೆ ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ,ಜೂನ್ 2 ರಂದು ಶರಣಾಗಲು ಸೂಚನೆ ನೀಡಿದೆ