
ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ರನ್ನು ಬಂಧಿಸಿರುವ ಕಾರಣ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅರ್ಹರಲ್ಲ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ಅರ್ಜಿದಾರರಾದ ಎಎಪಿ ಮಾಜಿ ಶಾಸಕ ಸಂದೀಪ್ ಕುಮಾರ್ ಅವರಿಗೆ ಛೀಮಾರಿ ಹಾಕಿದ್ದ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಕೇಳುವ ಯಾವುದೇ ಕಾನೂನು ಹಕ್ಕಿಲ್ಲ ಎಂದು ಹೇಳಿ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಅಲ್ಲದೆ, ನ್ಯಾಯಾಲಯವು ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡವನ್ನೂ ವಿಧಿಸಿತ್ತು.
ಇದಲ್ಲದೆ ಯಾವುದೇ ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಗೆ ಯಾವುದೇ ಅವಕಾಶವಿದೆಯೇ ಎಂದು ದೆಹಲಿ ಹೈಕೋರ್ಟ್ ಅರ್ಜಿದಾರರನ್ನು ಕೇಳಿತ್ತು. ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ಸಮಯವನ್ನು ಹಾಳು ಮಾಡುತ್ತಿದ್ದೀರಿ. ನಾವು ನಿಮಗೆ ಭಾರೀ ದಂಡವನ್ನು ವಿಧಿಸುತ್ತಿದ್ದೇವೆ ಎಂದು ಖಾರವಾಗಿ ನುಡಿದಿದೆ.