
ಬೆಂಗಳೂರು: ಸರಕಾರಿ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ಸ್ ಅರೆಕಾಲಿಕ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಿಸುವಂತೆ ರಾಜ್ಯ ಸರಕಾರ ಆದೇಶ ನೀಡಿದೆ.
ಇಂಜಿನಿಯರಿಂಗ್ ಪಾಲಿಟೆಕ್ನಿಕ್ ಕಾಲೇಜ್ ಕಿರಿಯ ತಾಂತ್ರಿಕ ಶಾಲೆಯ, ಪಾಲಿಟೆಕ್ನಿಕ್ ಕಾಲೇಜ್ ಉಪನ್ಯಾಸಕರಿಗೆ 7,500 ರಿಂದ 10 ಸಾವಿರ ರೂಪಾಯಿ ಕನಿಷ್ಠ ವೇತನ ನಿಗದಿ ಮಾಡಿದೆ. ಇನ್ನು ಅನುದಾನಿತ ಇಂಜಿನಿಯರಿಂಗ್ ಕಾಲೇಜ್ ಉಪನ್ಯಾಸಕರ ವೇತನ 10,000 ದಿಂದ 15,000 ಹೆಚ್ಚಿಸಲಾಗಿದೆ.
ಇನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜು ಹಾಗೂ ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರುಗಳಿಗೆ ಮಾಸಿಕ ಸಂಭಾವನೆಯನ್ನು ಕ್ರಮವಾಗಿ 7500 ರಿಂದ 10,000 ವರೆಗೆ ಹೆಚ್ಚಿಸಲು ಸರಕಾರ ಆದೇಶ ನೀಡಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದ ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವ ಧನವನ್ನು 7,500 ರಿಂದ 12,500 ರೂ. ಹಾಗೂ ಸರಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ದನವನ್ನು 10,000ಗಳಿಂದ 15,000 ರೂ. ಹೆಚ್ಚಿಸಲಾಗಿದೆ.













