
ಬೆಂಗಳೂರು: ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಹೈಕೋರ್ಟ್ ಫೆ.20 ರವರೆಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ಸಿಟಿ ರವಿ ಅವರು ಎಫ್‌ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಇದರ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠವು ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ಮಧ್ಯಂತರ ತಡೆ ನೀಡಿ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ನೋಟಿಸ್ ಜಾರಿಗೊಳಿಸಿದೆ.






























































































































