
ನವದೆಹಲಿ: ಆಗಸ್ಟ್ 19ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಆನ್‌ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ `ಆನ್‌ಲೈನ್ ಗೇಮಿಂಗ್ ತಡೆ’ ಮಸೂದೆಗೆ ಅನುಮೋದನೆ ನೀಡಿದೆ.
ಆನ್‌ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಮೂಲಗಳು ತಿಳಿಸಿದ್ದು, ಈ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಪರಿಚಯಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಆನ್‌ಲೈನ್ ಗೇಮ್ ಆ್ಯಪ್‌ಗಳಿಗೆ ಬ್ಯಾಂಕ್‌ಗಳು, ಸಂಸ್ಥೆಗಳು ಹಣ ವಹಿವಾಟಿಗೆ ಅನುಮತಿ ಕೊಡಬಾರದಂತೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಇತ್ತೀಚಿನ ತಿಂಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಮಸೂದೆ ಮಂಡನೆಗೆ ಕೇಂದ್ರವು ಮುಂದಾಗಿದ್ದು ಈಗಾಗಲೇ ಬೆಟ್ಟಿಂಗ್ ಆ್ಯಪ್ ಪ್ರಮೋಷನ್‌ನಲ್ಲಿ ಸ್ಟಾರ್‌ಗಳೂ ಭಾಗಿಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ.



















