
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶದ ಬಡ ಕುಟುಂಬಗಳಿಗೆ 5 ಲಕ್ಷ ರು.ವರೆಗೆ ಉಚಿತ ಆರೋಗ್ಯ ವಿಮಾ ಸೌಲಭ್ಯವನ್ನು ಕಲ್ಪಿಸುವ ಆಯುಷ್ಮಾನ್ ಭಾರತ ಯೋಜನೆಯನ್ನು 70 ವರ್ಷ ಮೇಲ್ಪಟ್ಟ ವೃದ್ಧರಿಗೂ ವಿಸ್ತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಇದೇ ವೇಳೆ, 12850 ಕೋಟಿ ರು. ವೆಚ್ಚದ ಆರೋಗ್ಯ ಮೂಲಸೌಕರ್ಯ ಯೋಜನೆಗಳಿಗೂ ಪ್ರಧಾನಿ ಶಂಕುಸ್ಥಾಪನೆ ಅಥವಾ ಉದ್ಘಾಟನೆಯನ್ನು ನೆರವೇರಿಸಿದ್ದು ಹಾಲಿ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಆಯುಷ್ಮಾನ್ ಭಾರತ ಆರೋಗ್ಯ ವಿಮಾ ಯೋಜನೆಯಡಿ 5 ಲಕ್ಷ ರು.ನ ಉಚಿತ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿದೆ. ಇದನ್ನು ಇದೀಗ 70 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೂ ವಿಸ್ತರಿಸಲಾಗಿದೆ. ಈ ಯೋಜನೆ ವಿಶೇಷವೆಂದರೆ ಈ ಯೋಜನೆಗೆ ಸೇರ್ಪಡೆಯಾಗಲು ಯಾವುದೇ ಆದಾಯ ಮಿತಿ ಇಲ್ಲ. ಕುಟುಂಬದ ಸಮೂಹ ಆರೋಗ್ಯ ವಿಮೆ ಹೊರತಾಗಿ 6 ಕೋಟಿ ಹಿರಿಯ ನಾಗರಿಕರಿಗೆ ಪ್ರತ್ಯೇಕ 5 ಲಕ್ಷ ರು. ವಿಮಾ ಸೌಲಭ್ಯ ದೊರೆಯಲಿದೆ.







