28.8 C
Udupi
Thursday, March 5, 2026
spot_img
spot_img
HomeBlogಆರೋಗ್ಯ ಸಮಸ್ಯೆಯಿಂದ ದೆಹಲಿ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ಆರೋಗ್ಯ ಸಮಸ್ಯೆಯಿಂದ ದೆಹಲಿ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಹೀಗಾಗಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆ ದಾಖಲಾಗಿ ನುರಿತ ವೈದ್ಯರ ತಂಡದ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ವರದಿಯಾಗಿದೆ.

ಕಫ, ಶೀತ, ಉಸಿರಾಟ ಸಮಸ್ಯೆ, ಅಸ್ವಸ್ಥತೆಯಿಂದ ಬಳಲಿದ ಸೋನಿಯಾ ಗಾಂಧಿಯನ್ನು ಇಂದು ಬೆಳಗ್ಗೆ ಆಸ್ಪತ್ರೆ ದಾಖಲಿಸಲಾಗಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕವಿಲ್ಲ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ಸೋನಿಯಾ ಗಾಂಧಿ ಕಳೆದ ಹಲವು ದಿನಗಳಿಂದ ಕಫ ಸಮಸ್ಯೆಯಿಂದ ಬಳಲುತ್ತಿದ್ದು ಶೀತ, ಉಸಿರಾಟದ ಸಮಸ್ಯೆ ಕುರಿತು ಸೋನಿಯಾ ಗಾಂಧಿ ರೂಟಿನ್ ಚೆಕ್ಅಪ್ ನಡೆಸುತ್ತಿದ್ದಾರೆ. ದೆಹಲಿ ವಾಯು ಮಾಲಿನ್ಯ ಸಮಸ್ಯೆ ಕಾರಣದಿಂದ ಸೋನಿಯಾ ಗಾಂಧಿ ಕಫ ಸಮಸ್ಯೆ ಹೆಚ್ಚಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page