
ನವದೆಹಲಿ: ತೆಲುಗು ದೇಶಂ ಪಕ್ಷದ ನೇತಾರ ಚಂದ್ರಬಾಬು ನಾಯ್ಡು ಇಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅಮರಾವತಿ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ ನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು ಇವರ ಜೊತೆ ಇತರ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅನೇಕ ನಾಯಕರು ಭಾಗಿಯಾಗಲಿದ್ದಾರೆ. ಬಿಜೆಪಿ ಜನ ಸೇನಾ ಮತ್ತು ಟಿ ಡಿ ಪಿ ಯ ಎಲ್ಲಾ ಶಾಸಕರು ಆಂಧ್ರಪ್ರದೇಶದ ಮುಂಬರುವ ಎನ್‌ಡಿಎ ಸರಕಾರದ ಮುಖ್ಯಮಂತ್ರಿ ಆಗಲು ಒಪ್ಪಿಗೆ ನೀಡಿದ್ದಾರೆ ಎಂದು ಟಿಡಿಪಿ ಮುಖ್ಯಸ್ಥ ಚಂದ್ರ ಬಾಬು ನಾಯ್ಡು ತಿಳಿಸಿದ್ದಾರೆ.