
ಬೆಂಗಳೂರು: ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14 ರಿಂದ 21ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-02 ನಡೆದಿದ್ದು ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದರ ಫಲಿತಾಂಶವನ್ನು ಇಂದು
ಬೆಳಗ್ಗೆ 11:30ಕ್ಕೆ ಬಿಡುಗಡೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್ಲೋಡ್ ಮಾಡಲು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಕೆಎಸ್ಇಎಬಿ ಅಧಿಕೃತ ವೆಬ್ಸೈಟ್ kseab.karnataka.gov.in ಅಥವಾ karresults.nic.inಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದಾಗಿದೆ.
1.44 ಬಾಲಕರು, 79,148 ಬಾಲಕಿಯರು ಸೇರಿದಂತೆ 2.23 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಇದರಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ದಿಗಾಗಿ ಎರಡನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನು ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.