
ಇಂದು ಏಪ್ರಿಲ್ 07 ಮಂಗಳವಾರದಂದು ಕಾರ್ಕಳ ನಗರ ಪೊಲೀಸ್ ಠಾಣೆ ಮತ್ತು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆ ವತಿಯಿಂದ ಕಾರ್ಕಳದ ತಾಲೂಕು ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ ನಡೆಯಲಿದೆ.
ರಾತ್ರಿ ಗಂಟೆ ಎಂಟು ಮೂವತ್ತಕ್ಕೆ ಗಗ್ಗರಸೇವೆ ಹಾಗೂ 9:30ಕ್ಕೆ ಅನ್ನ ಸಂತರ್ಪಣೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಥಳೀಯರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪೊಲೀಸ್ ಠಾಣಾ ವತಿಯಿಂದ ಆಹ್ವಾನಿಸಲಾಗಿದೆ.









