
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಲಹೆಯ ಮೇರೆಗೆ ಇಂದೇ ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗತ್ತಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ ಪ್ರಕರಣ ಸಂಬಂಧ ಸಿಬಿಐ (CBI) ಎಫ್‌ಐಆರ್ ದಾಖಲಿಸಿದೆ. ಈ ಪ್ರಕರಣ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿದೆ.