
ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ಇಂದು ಮೊದಲ ಹಂತ ಚುನಾವಣೆ ನಡೆಯುತ್ತಿದ್ದು ದಕ್ಷಿಣದ 14 ಜಿಲ್ಲೆಗಳಿಗೆ ಚುನಾವಣೆ ನಡೆಯಲಿದೆ.
ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನದಕ್ಕೆ ಅವಕಾಶವಿದ್ದು 2.88 ಕೋಟಿ ಮತದಾರರಿಗೆ, 30602 ಮತಗಟ್ಟೆ ತೆರೆಯಲಾಗಿದೆ. ಚುನಾವಣಾ ಕಾರ್ಯಕ್ಕೆ 1.4 ಲಕ್ಷ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು ಇಂದು 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿ, ಶಾಲೆ, ಕಾಲೇಜು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಮತದಾನದ ಗುರುತಿನ ಚೀಟಿ ಇಲ್ಲದೇ ಇದ್ದಲ್ಲಿ, ಆಧಾರ್ ಕಾರ್ಡ್, ನರೇಗಾ ಕಾರ್ಡ್, ಬ್ಯಾಂಕ್/ಅಂಚೆ ಕಚೇರಿ ನೀಡಿದ ಭಾವಚಿತ್ರ ಇರುವ ಪಾಸ್ ಬುಕ್ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಭಾವಚಿತ್ರ ಇರುವ ಪಿಂಚಣಿ ದಾಖಲೆ, ಕೇಂದ್ರ/ರಾಜ್ಯ/ಸಾರ್ವಜನಿಕ ಸಂಸ್ಥೆಗಳು ನೀಡಿದ ಭಾವಚಿತ್ರ ಇರುವ ಸೇವಾ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದಾಗಿದೆ.