
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಅಭಿವೃದ್ಧಿ ಪ್ರಾಧಿಕಾರ ‘ಸೈಟು ಅಕ್ರಮ’ ಪ್ರಕರಣದ ಸಂಬಂಧ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸೋಮವಾರದಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ.
ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಹೈಕೋಟ್೯ಗೆ ಅರ್ಜಿ ಸಲ್ಲಿಸಲಿದ್ದಾರೆ. ಖಾಸಗಿ ದೂರಿನ ಆಧಾರದ ಮೇಲೆ ಗೌರ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 17-ಎ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218 ರ ಅಡಿ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿರುವುದರಿಂದ ರದ್ದುಪಡಿಸ ಬೇಕು ಎಂದು ವಕೀಲರು ವಾದ ಮಾಡಲಿದ್ದಾರೆ ಎನ್ನಲಾಗಿದೆ.













