ಚರ್ಚೆಯ ವಿಷಯವಾದ ಸಿಎಂ ಹೇಳಿಕೆ.

ಮೈಸೂರು: ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದು ಈ ವೇಳೆ ಇನ್ನೊಂದು ವರ್ಷದವರೆಗೂ ನಾಡದೇವತೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಇರಲಿ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್, ಸಿಎಂ ರಾಜೀನಾಮೆಗೆ ಪಟ್ಟು ಹಿಡಿದಿವೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಜನರ ಆಶೀರ್ವಾದದಿಂದ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ. ಈ ನಾಡಿನ ಜನರ ಬೆಂಬಲ ಇರುವವರೆಗೂ ನಾನೇ ಸಿಎಂ ಆಗಿರುತ್ತೇನೆ. ಇನ್ನೊಂದು ವರ್ಷದವರೆಗೂ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ನನ್ನ ಮೆಲೆ ಇರಲಿ ಎಂದು ಪ್ರಾರ್ಥಿಸಿದರು.













