27.7 C
Udupi
Sunday, April 26, 2026
spot_img
spot_img
HomeBlog"ಮೋದಿಯಿಂದ ದೇಶ ದಿವಾಳಿ, ಗಡ್ಕರಿಗೆ ಪ್ರಧಾನಿ ಹುದ್ದೆ ಬಿಟ್ಟುಕೊಡಲಿ" -ಸಚಿವ ಸಂತೋಷ್ ಲಾಡ್

“ಮೋದಿಯಿಂದ ದೇಶ ದಿವಾಳಿ, ಗಡ್ಕರಿಗೆ ಪ್ರಧಾನಿ ಹುದ್ದೆ ಬಿಟ್ಟುಕೊಡಲಿ” -ಸಚಿವ ಸಂತೋಷ್ ಲಾಡ್

ಗದಗ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಗದಗ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ‌ ನಡೆದ ಸುದ್ದಿಗಾರರೊಂದಿಗೆ ಮಾತನಾಡಿ ದೇಶದ ಪರಿಸ್ಥಿತಿ ಬದಲಾವಣೆ ಆಗಿದೆ. ಈಗ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ನಮ್ಮ ದೇಶ ದಿವಾಳಿಯಾಗಿದ್ದು, ನಿತಿನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿಯಾಗಬೇಕು. ಮೋದಿ ಅವರು ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರು ಮತ್ತು ಮುಖಂಡರು ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದ ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ‌ ವಿನಃ ಸಚಿವ ಸಂಪುಟ‌ ಸರ್ಜರಿ‌ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.ಜನರ ಸಮಸ್ಯೆಗಳಿಗಿಂತ‌‌ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ. ಜನರ ವಿಚಾರಗಳಿಗೆ ಗಮನ‌ ನೀಡಬೇಕು ಎಂದು ಹೇಳಿದರು.

ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಿಂದಾಗಿ ಎಷ್ಟೊಂದು ಜನರ ಸಾವು ನೋವು ಉಂಟಾಗಿದೆ. ಸಾವಿರಾರು ಜನರಿಗೆ ಅನಾನುಕೂಲವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ನೆರವಾಗುವಂತೆ ಸುದ್ದಿಗಾರರು ಕೇಂದ್ರವನ್ನು‌ ಪ್ರಶ್ನೆ ಮಾಡಬೇಕು ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page