
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಆತ್ಮ ನಿರ್ಭರದ ಕನಸು ನನಸಾಗಿದ್ದು ಅದೇನೆಂದರೆ ಭಾರತದ ಪ್ರಮುಖ ಹಡಗು ನಿರ್ಮಾಣ ಸಂಸ್ಥೆಯಾದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ. ನಾರ್ವೆ ದೇಶಕ್ಕೆ 3,800 ಟಿಡಬ್ಲ್ಯೂಡಿ ಸಾಮರ್ಥ್ಯದ ಬೃಹತ್ ಹಡಗನ್ನು ಪೂರೈಕೆ ಮಾಡಿದೆ.
ಭಾರತದ ಜೊತೆ ನಾರ್ವೆಯು ಸುಮಾರು 2,000 ಕೋಟಿ ರೂ. ಎಂಒಯು ಮಾಡಿಕೊಂಡಿದ್ದು, ಮೇಕ್ ಇನ್ ಇಂಡಿಯಾ ಯೋಜನೆಗಳು ಯಶಸ್ವಿ ಆಗಿರುವುದಕ್ಕೆ ಇದು ಸಾಕ್ಷಿಯಾಗಿದೆ. ನಾರ್ವೆಯ ರಾಯಭಾರ ಕಚೇರಿಯ ಅಧಿಕಾರಿಗಳು ಮತ್ತು ನಾರ್ವೆ ವಿಲ್ಸನ್ ಕಂಪನಿ ಸಿಬ್ಬಂದಿ ಖರೀದಿ ಪ್ರಕ್ರಿಯೆ ಪೂರೈಸಿದ್ದು ಉಡುಪಿಯ ಮಲ್ಪೆ ಸಮೀಪದ ಬೋಟ್ ಬಿಲ್ಡಿಂಗ್ ಯಾರ್ಡ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕುವ ಜೊತೆ ಭಾರತೀಯ ಸಂಸ್ಕೃತಿಯ ಪ್ರಕಾರ ಪೂಜೆ-ಪುನಸ್ಕಾರ ನೆರವೇರಿಸಲಾಯಿತು.
ಆತ್ಮನಿರ್ಭರ ಮತ್ತು ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್‌ನಲ್ಲಿ ಈ ಬೃಹತ್ ಶಿಪ್ ತಯಾರಾಗಿದ್ದು ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಸ್ಥಳೀಯರು ಸೇರಿದಂತೆ ರಾಜ್ಯದ ವಿವಿಧ ಭಾಗದ 1,000ಕ್ಕೂ ಹೆಚ್ಚು ಜನ ಈಗಾಗಲೇ ಉದ್ಯೋಗ ಪಡೆದಿದ್ದಾರೆ. ಕಾರ್ಗೋ ಹಡಗುಗಳ ನಿರ್ಮಾಣದಲ್ಲಿ ಭಾರತ ವಿಶ್ವದಲ್ಲೇ ಸದ್ಯ 17ನೇ ಸ್ಥಾನದಲ್ಲಿದೆ. 2030ರ ವೇಳೆಗೆ ಟಾಪ್ 10 ಆಗುವ ಗುರಿಯನ್ನು ಹೊಂದಿದ್ದು 2047ರ ವೇಳೆಗೆ ಟಾಪ್ 5ರ ಗುರಿಮುಟ್ಟುವ ಟಾರ್ಗೆಟ್ ಅನ್ನು ಭಾರತ ಸರ್ಕಾರ ನೀಡಿದೆ.