
ಉಡುಪಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4 ರಂದು ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು ಈ ಸಂದರ್ಭ ಚುನಾವಣಾ ಆಯೋಗ ನೀಡಿರುವ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು ಎಂದು ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯ ಮತ ಎಣಿಕೆಯ ಕಾರ್ಯದ ಪೂರ್ವ ತಯಾರಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಮತ ಎಣಿಕೆಯ ಕಾರ್ಯ ಸುಲಲಿತವಾಗಿ ನಡೆಯಲು ಚುನಾವಣಾ ಆಯೋಗ ನೀಡಿರುವ ಮಾರ್ಗದರ್ಶನದಂತೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.