
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಅಲ್ಪಾಡಿ- ಆರ್ಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಖೋ ಖೋ ಪಂದ್ಯಾಟವು ದಿನಾಂಕ ಸೆ.10 ರಂದು ಸರಕಾರಿ ಪ್ರೌಢಶಾಲೆ ಆಲ್ಪಾಡಿ ಆರ್ಡಿ ಯಲ್ಲಿ ನಡೆಯಿತು.
ಸರಕಾರಿ ಪ್ರೌಢಶಾಲೆ ಕಲ್ಯಾದ ಬಾಲಕರ ತಂಡವು ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಪ್ರೌಢಶಾಲಾ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ,ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಎಸ್.ಡಿ.ಎಮ್.ಸಿ ಹಾಗೂ ಹಳೆ ವಿದ್ಯಾರ್ಥಿ ಸಂಘ ಕ್ರೀಡಾಪಟುಗಳಿಗೆ ಅಭಿನಂದಿಸಿ ಶುಭ ಹಾರೈಸಿದ್ದಾರೆ













