
ಉಡುಪಿ ಜ್ಞಾನಸುಧಾ ವಿದ್ಯಾರ್ಥಿ ಫುಟ್ ಬಾಲ್ ನಲ್ಲಿ ಜಿಲ್ಲಾಮಟ್ಟಕ್ಕೆ
ದಿನಾಂಕ 12.09.2024 ರಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ಮಣಿಪಾಲ್ ಜೂನಿಯರ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಅನಿಶ್ ಕಲ್ಮಾಡಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕಲ್ಮಾಡಿಯ ಕೆ ಜಯರಾಮ್ ಭಟ್ ಹಾಗೂ ವೀಣಾ ಭಟ್‌ರವರ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.













