
ಉಡುಪಿ: ಹಿರಿಯ ಪತ್ರಕರ್ತ, ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಸೋಮವಾರ ತಡರಾತ್ರಿ ಹೃದಯಾಘಾತದಿಂದ ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.ಇವರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರ ಸಂತಾಪ ವ್ಯಕ್ತಪಡಿಸಿದೆ.













