
ಮಂಗಳವಾರ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಉಡುಪಿಗೆ ಭೇಟಿ ನೀಡಿ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್ ಗೂ ಮುನ್ನ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದು ಇದೀಗ ಇಂದು ಈ ಹರಕೆ ತೀರಿಸಲು ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.