
ಕಾರ್ಕಳ : ಮಂಜುನಾಥ್ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಮೈದಾನದಲ್ಲಿ ಮಾರ್ಚ್ 13ರಂದು ನೆರವೇರಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳದ ಡಿವೈಎಸ್ಪಿ ಎಂ. ಆರ್ ವಿಜಯ್ ಪ್ರಸಾದ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಡ್ರಗ್ಸ್ ಮತ್ತು ಟ್ರಾಫಿಕ್ ರೂಲ್ಸ್ ಗಳ ಮಾಹಿತಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಐ.ಕ್ಯೂ.ಎ. ಸಿ ಸಂಚಾಲಕರಾದ ವಿನಯ ಎಂ.ಎಸ್, ದೈಹಿಕ ಶಿಕ್ಷಣ ನಿರ್ದೇಶಕರಾದ . ಡಾ. ಜಯ ಭಾರತಿ ಎ,ಕ್ರೀಡಾ ಕಾರ್ಯದರ್ಶಿಗಳಾದ ಸುಕೇಶ, ಪೂಜಾ, ಸಿಂಚನ, ಪ್ರದೀಪ್, ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪಕ ರಾದ ಅವಿನಾಶ್ ನಿರೂಪಿಸಿದರು.ತೃತೀಯ ಬಿಕಾಂನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾದ ಶ್ರೀಮತಿ ಜ್ಯೋತಿ ಎಲ್. ಜನ್ನೆ ಸ್ವಾಗತಿಸಿ , ನಿರ್ವಹಣಾ ಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಸಂಧ್ಯಾಭಂಡಾರಿ ವಂದಿಸಿದರು.





















































































