28.9 C
Udupi
Monday, May 4, 2026
spot_img
spot_img
HomeBlogಎಚ್ಎಂಪಿವಿ ವೈರಸ್ ಏರ್‌ಪೋರ್ಟ್‌ಗಳಲ್ಲಿ ಸದ್ಯಕ್ಕೆ ಸ್ಕ್ರೀನಿಂಗ್ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಎಚ್ಎಂಪಿವಿ ವೈರಸ್ ಏರ್‌ಪೋರ್ಟ್‌ಗಳಲ್ಲಿ ಸದ್ಯಕ್ಕೆ ಸ್ಕ್ರೀನಿಂಗ್ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಎಚ್‌ಎಂಪಿವಿ ವೈರಸ್‌ನ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಚೀನಾ ದೇಶದಲ್ಲಿ ಎಚ್‌ಎಂಪಿವಿ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು ಇದೀಗ ಕರ್ನಾಟಕದಲ್ಲಿ ವೈರಸ್ ದೃಢಪಟ್ಟಿರುವ ಮಾಹಿತಿ ದೊರೆತಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ವೈರಸ್ ಹರಡದಂತೆ ಎಚ್ಚರ ವಹಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಸೋಂಕು ತಡೆಗೆ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪ್ರಾರಂಭಿಸಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸದ್ಯಕ್ಕೆ ಆ ರೀತಿ ಕ್ರಮ ಕೈಗೊಳ್ಳುತ್ತಿಲ್ಲ. ಆರೋಗ್ಯ ಸಚಿವರು ಸಭೆ ನಡೆಸಿದ್ದು, ಅಗತ್ಯ ಕ್ರಮಗಳ ಬಗ್ಗೆ ಅವರು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page