30.9 C
Udupi
Monday, April 13, 2026
spot_img
spot_img
HomeBlogಎಬಿವಿಪಿ ಕಾರ್ಕಳ ವತಿಯಿಂದ ಬಿ ಎಸ್ಸಿ ನರ್ಸಿಂಗ್ ಕಾಲೇಜು ಕಾರ್ಕಳದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಪ್ರಾಂಶುಪಾಲರರಿಗೆ ಮನವಿ

ಎಬಿವಿಪಿ ಕಾರ್ಕಳ ವತಿಯಿಂದ ಬಿ ಎಸ್ಸಿ ನರ್ಸಿಂಗ್ ಕಾಲೇಜು ಕಾರ್ಕಳದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಪ್ರಾಂಶುಪಾಲರರಿಗೆ ಮನವಿ

ಕಾರ್ಕಳ :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಬಿ ಎಸ್ಸಿ ನರ್ಸಿಂಗ್ ಕಾಲೇಜು ಕಾರ್ಕಳ ದಲ್ಲಿ ಇರುವಂತಹ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಒಂದು ಸುಸಜ್ಜಿತ ಕಟ್ಟಡವಿಲ್ಲದೆ, ಕಾಲೇಜು ನಿರ್ವಹಣೆಗೆ ಬೇಕಾದ ಗುಮಾಸ್ತರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಇಲ್ಲದೆ, ಸರಿಯಾದ ಉಪನ್ಯಾಸಕರು ಇಲ್ಲದೆ, ಸರಿಯಾದ ತರಗತಿ ಕೊಠಡಿಗಳು ಇಲ್ಲದೆ, ಶಾಚಾಲಯಗಳ ವ್ಯೆವಸ್ಥೆಗಳು ಸರಿಯಾಗಿ ಇಲ್ಲದೆ, ನರ್ಸಿಂಗ್ ವ್ಯಾಸಂಗಕ್ಕೆ ಬೇಕಾದ ಅತ್ಯಗತ್ಯ ಉಪಕರಣಗಳು ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾದ ಸರಿಯಾದ ಪ್ರಯೋಗಾಲಯವಿಲ್ಲದೆ, ಗ್ರಂಥಾಲಯ ವ್ಯವಸ್ಥೆ ಕಾಲೇಜಿನಲ್ಲಿ ಇಲ್ಲದೆ, ವಿದ್ಯಾರ್ಥಿಗಳು ಸಮಸ್ಯೆಗಳ ಸರಮಾಲೆಯನ್ನು ಎದುರಿಸುತ್ತಿದ್ದಾರೆ. ಅದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಮಸ್ಯೆ ಆಗುತ್ತಿದ್ದು ಇದಕ್ಕೆ ಸಂಬಂದಿಸಿ ಕಾಲೇಜಿನ ಆಡಳಿತ ಮಂಡಳಿ ತಕ್ಷಣವೇ ಬಂದು ಸರಿಯಾದ ವ್ಯೆವಸ್ಥೆ ಮಾಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಒಂದು ಉತ್ತಮವಾದ ಅವಕಾಶ ಒದಗಿಸಬೇಕಾಗಿ ಎಬಿವಿಪಿ ಕಾರ್ಕಳ ವತಿಯಿಂದ ಪ್ರಾಂಶುಪಾಲಾರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿಗಳಾದ ಗಣೇಶ್ ಪೂಜಾರಿ, ಉಡುಪಿ ಜಿಲ್ಲಾ ಸಂಚಾಲಕರದ ಶ್ರೇಯಸ್ ಅಂಚನ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page