
ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಎಲೆಕ್ಟ್ರಾನಿಕ್ ಸಿಟಿಯ ಜಿಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಪಾರ್ಟಿ ಆಯೋಜಕ ವಾಸು ಹಾಗೂ ಮೂವರು ಡ್ರಗ್ ಪೆಡ್ಲರ್ಸ್ ಸೇರಿದಂತೆ ಐವರನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಈ ಪಾರ್ಟಿಯಲ್ಲಿ ಕೆಲವು ತೆಲುಗು ನಟಿಯರು, ಮಾಡೆಲ್‌ಗಳು ಕೂಡ ಭಾಗಿಯಾಗಿದ್ದು ಪೊಲೀಸರ ದಾಳಿ ವೇಳೆ 45 ಗ್ರಾಂ ಡ್ರಗ್ಸ್, MDMA, ಕೊಕೆನ್ ಸೇರಿ ಹಲವು ಬಗೆಯ ಮಾದಕ ವಸ್ತುಗಳು ಪತ್ತೆಯಾಗಿವೆ.ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಹೊಂದಿರುವ ಹೈದರಾಬಾದ್ ಮೂಲದ ವಾಸು ಎಂಬುವವರು G.R.ಫಾರ್ಮ್ಹೌಸ್ನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದು 78 ಜನರಿಗೆ ಬರ್ತಡೇ ಪಾರ್ಟಿಗೆ ಆಹ್ವಾನ ನೀಡಲಾಗಿತ್ತು. ಸದ್ಯ ಸಿಸಿಬಿ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಕೆಲ ಮಾದಕವಸ್ತುವನ್ನು ಟಾಯ್ಲೆಟ್ನಲ್ಲಿ ಬಿಸಾಕಿ ನೀರುಹಾಕಿ ನಾಶ ಮಾಡಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.