
ಎಸ್ ವಿ ಟಿ ವಿದ್ಯಾ ಸಂಸ್ಥೆಗಳ 2024-25 ನೇ ಸಾಲಿನ ಯಕ್ಷಗಾನ ಕೇಂದ್ರ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಎಸ್ ವಿ ಎಜ್ಯುಕೇಶನ್ ಟ್ರಸ್ಟ್ (ರಿ) ಕಾರ್ಕಳ ದ ಕಾರ್ಯದರ್ಶಿ ಶ್ರೀ ಕೆ.ಪಿ ಶೆಣೈ ಅಧ್ಯಕ್ಷತೆ ವಹಿಸಿ, ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು. ಯಕ್ಷಗಾನ ಕೇಂದ್ರದ ಮಾರ್ಗದರ್ಶಕರಾದ ಎಸ್ ರಾಮ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿ ಶುಭ ಹಾರೈಸಿದರು. ಕೇಂದ್ರದ ಪ್ರಧಾನ ಗುರುಗಳಾದ ಅಜಿತ್ ಕುಮಾರ್ ಜೈನ್ ಯಕ್ಷಗಾನದ ಹೆಜ್ಜೆಗಾರಿಕೆಯನ್ನು ಪ್ರಾರಂಭಿಸಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಎಚ್.ಜಿ ಬಂಡಿವಡ್ಡರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ರಾಮದಾಸ್ ಪ್ರಭು, ಎಸ್ ವಿ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಉಷಾ ನಾಯಕ್ ಉಪಸ್ಥಿತರಿದ್ದರು.
ದೇವದಾಸ್ ಕೆರೆಮನೆ ಸ್ವಾಗತಿಸಿ, ನಿರೂಪಿಸಿದರು. ಸುನಿಲ್ ಎಸ್ ಶೆಟ್ಟಿ ವಂದಿಸಿದರು.