
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು , ಉತ್ತರ ಒಳ ನಾಡಿನ ಹಲವು ಭಾಗಗಳಲ್ಲಿ, ಏಪ್ರಿಲ್ 13 ಮತ್ತು 14 ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ. ಕರಾವಳಿ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .











