32.5 C
Udupi
Wednesday, April 30, 2025
spot_img
spot_img
HomeBlogಏ.1ರಿಂದ ಎಲ್ಲ ಚಿಲ್ಲರೆ ಅಂಗಡಿ, ಇ-ಕಾಮರ್ಸ್ ಡೆಲಿವರಿ ಆಪ್‌ಗಳಲ್ಲೂ ನಂದಿನಿ ಇಡ್ಲಿ-ದೋಸೆ ಹಿಟ್ಟು ಲಭ್ಯ!

ಏ.1ರಿಂದ ಎಲ್ಲ ಚಿಲ್ಲರೆ ಅಂಗಡಿ, ಇ-ಕಾಮರ್ಸ್ ಡೆಲಿವರಿ ಆಪ್‌ಗಳಲ್ಲೂ ನಂದಿನಿ ಇಡ್ಲಿ-ದೋಸೆ ಹಿಟ್ಟು ಲಭ್ಯ!

ಬೆಂಗಳೂರು: ಕಳೆದ ಡಿಸೆಂಬರ್ ತಿಂಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದಿಂದ ಮಾರುಕಟ್ಟೆಗೆ ಬಿಡುಗಡೆ ಮಾಡಲಾದ ಪ್ರೊಟೀನ್ ಭರಿತ ನಂದಿನಿ ಇಡ್ಲಿ-ದೋಸೆ ಹಿಟ್ಟು ಬಳಕೆಗೆ ಗ್ರಾಹಕರಿಂದ ಭಾರೀ ಬೇಡಿಕೆಯಿದ್ದು ಈ ಹಿನ್ನೆಲೆಯಲ್ಲಿ ನಂದಿನಿ ಬ್ರ್ಯಾಂಡ್‌ನ ಇಡ್ಲಿ-ದೋಸೆ ಹಿಟ್ಟು ಜನರಿಗೆ ಲಭ್ಯವಾಗುವಂತೆ ಮಾಡಲು ಏ.1ರಿಂದ ಎಲ್ಲ ಚಿಲ್ಲರೆ ಅಂಗಡಿಗಳು, ಡೆಲಿವರಿ ಮಾಡುವ ಆಪ್‌ಗಳು, ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು, ಶಾಪಿಂಗ್ ಮಾಲ್‌ಗಳಲ್ಲಿ ಲಭ್ಯವಾಗಲಿದೆ.

ಈವರೆಗೆ ಪ್ರತಿದಿನ ಸರಾಸರಿ 4,600 ಕೆ.ಜಿ. ಹಿಟ್ಟನ್ನು ಮಾರಾಟ ಮಾಡಲಾಗುತ್ತಿದ್ದು ಇದೀಗ ಈ ಮಾರಾಟವನ್ನು ಮುಂದಿನ 3 ತಿಂಗಳಲ್ಲಿ 15,000 ಕೆ.ಜಿ.ಗೆ ಹೆಚ್ಚಿಸಲು ಕೆಎಂಎಫ್ ಯೋಜನೆ ರೂಪಿಸಿದೆ. ಹೀಗಾಗಿ, ಬೆಂಗಳೂರಿನಲ್ಲಿರುವ 750 ನಂದಿನಿ ಮಳಿಗೆಗಳ ಮೂಲಕ ನಂದಿನಿ ಇಡ್ಲಿ-ದೋಸೆ ಹಿಟ್ಟನ್ನು ಮಾರಾಟ ಮಾಡುತ್ತಿದ್ದ ಕೆಎಂಎಫ್ ಏ.1ರಿಂದ ಎಲ್ಲ ಕ್ವಿಕ್‌ ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳು, ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳು, ಚಿಲ್ಲರೆ ಅಂಗಡಿಗಳಿಗೆ ಪೂರೈಕೆ ಮಾಡಲು ಸಿದ್ಧವಾಗಿದೆ.

ಏಪ್ರಿಲ್ ತಿಂಗಳಿಂದ ಸ್ವಿಗ್ಗಿ ಇನ್‌ಸ್ಟಾಮಾರ್ಟ್‌, ಬ್ಲಿಂಕಿಟ್, ಬಿಗ್‌ಬಾಸ್ಕೆಟ್ ಮತ್ತು ಜೆಪ್ಟೊ ಸೇರಿ ಅನೇಕ ಕ್ವಿಕ್‌ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮತ್ತು ಸೂಪರ್‌ ಮಾರ್ಕೆಟ್‌ಗಳಲ್ಲಿ ನಂದಿನಿ ದೋಸೆ-ಇಡ್ಲಿ ಹಿಟ್ಟು ಲಭ್ಯವಾಗಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page