
ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡ್ತಲ ಗ್ರಾಮದ ಅಂಗಡಿ ಕೋಣೆಗಳನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಬಾಡಿಗೆ ನೀಡುವ ಉದ್ದೇಶದಿಂದ ಬಹಿರಂಗ ಏಲಂ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ.
ಈ ಏಲಂ ಪ್ರಕ್ರಿಯೆಯು ಜೂನ್ 30, 2026ರಂದು ಪೂರ್ವಾಹ್ನ 11:00 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಏಲಂಗೆ ಸಂಬಂಧಿಸಿದ ನಿಯಮಗಳು ಹಾಗೂ ಹೆಚ್ಚಿನ ಮಾಹಿತಿಯನ್ನು ಗ್ರಾಮ ಪಂಚಾಯತ್ ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಆಸಕ್ತರು ರೂ. 2000 ಠೇವಣಿ ಮೊತ್ತ ಪಾವತಿಸಿ ಏಲಂನಲ್ಲಿ ಭಾಗವಹಿಸಬಹುದು.
ಅಗತ್ಯ ಪರಿಸ್ಥಿತಿಗಳಲ್ಲಿ ಏಲಂ ಪ್ರಕ್ರಿಯೆಯನ್ನು ಮುಂದೂಡುವ ಅಥವಾ ರದ್ದುಪಡಿಸುವ ಅಧಿಕಾರ ಗ್ರಾಮ ಪಂಚಾಯತ್ಗೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.





















































































