
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಡಾ. ರಕ್ಷಾ ಕುಮಾರಿ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ನಡೆಸಿದ M.D.S. ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಪಡೆದಿದ್ದಾರೆ.
ಕಡ್ತಲ ಗ್ರಾಮದ ಶ್ರೀಮತಿ ರಕ್ಷ್ಮಿ ಆರ್. ಪ್ರಭು ಮತ್ತು ರವೀಂದ್ರ ಪ್ರಭು ಕಡ್ತಲ ದಂಪತಿಯ ಪುತ್ರಿಯಾಗಿರುವ ಡಾ. ರಕ್ಷಾ ಕುಮಾರಿ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಲ್ಕಾಡು ಸರ್ಕಾರಿ ಶಾಲೆಯಲ್ಲಿ ಪೂರ್ಣಗೊಳಿಸಿದರು. ಬಳಿಕ ಪ್ರೌಢ ಶಿಕ್ಷಣವನ್ನು ಶಿರ್ತಾಡಿಯ ಭುವನಜ್ಯೋತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹೆಬ್ರಿಯ ಅಮೃತಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಮುಗಿಸಿದರು.
ನಂತರ ಬೆಂಗಳೂರಿನ ದಯಾನಂದ ಸಾಗರ್ ದಂತ ವೈದ್ಯಕೀಯ ಕಾಲೇಜಿನಲ್ಲಿ B.D.S. ಪದವಿಯನ್ನು ಪಡೆದು, ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ M.D.S. (Periodontics and Implantology) ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಈ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.






