ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಂ ಮಿಶ್ರಿ

ಕದನ ವಿರಾಮದ ಒಪ್ಪಂದ ನಡೆದ ಕೆಲವೇ ಗಂಟೆಗಳಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದೆ ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದ್ದಾರೆ.
ಜಮ್ಮುವಿನ ಹಲವು ಪ್ರದೇಶಗಳಲ್ಲಿ ಜೋರಾಗಿ ಸ್ಪೋಟಗಳು ಕೇಳಿ ಬಂದಿವೆ. ಕೆಲವು ದಿನಗಳಿಂದ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ನಿರ್ಮಿಸಲು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಇಂದು ಸಂಜೆ ಒಪ್ಪಂದ ಮಾಡಿಕೊಳ್ಳಲಾಯಿತು. ಆದರೆ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸಿದೆ ಎಂದು ಅವರು ತಿಳಿಸಿದ್ದಾರೆ.
ಭಾರತೀಯ ಸೇನೆಯು ಗಡಿ ಒಳ ನುಸುಳುವಿಕೆ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಒಳ ನುಸುಳುವಿಕೆ ಅತ್ಯಂತ ಖಂಡನೀಯ. ಇದಕ್ಕೆ ಪಾಕಿಸ್ತಾನ ಸಂಪೂರ್ಣ ಜವಾಬ್ದಾರಿ. ಪಾಕಿಸ್ತಾನವು ಈ ಪರಿಸ್ಥಿತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಒಳನುಸುಳುವಿಕೆಯನ್ನು ತಡೆಯಲು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.




















