
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 07:04 ಕ್ಕೆ ನಿಧನರಾಗಿದ್ದಾರೆ.
ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.
ಕಳೆದ ಕೆಲ ದಿನಗಳಿಂದಲೂ ಸುದೀಪ್ ಅವರ ತಾಯಿಯವರು ಅನಾರೋಗ್ಯ ಸಂಬಂಧ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.













