
ಕೋಲಾರದಲ್ಲಿ ನಡೆದ ರಾಜ್ಯ ಮಟ್ಟದ ಆಮೇಚೂರ್ ಕಬಡ್ಡಿ ಪಂದ್ಯಾಟ ದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಕಾರ್ಕಳ ಎಸ್. ವಿ. ಟಿ. ವನಿತಾ ಪದವಿ ಪೂರ್ವ ಕಾಲೇಜಿನ ಹುಡುಗಿಯರ ತಂಡ ನಾಲ್ಕನೇ ಸ್ಥಾನ ಪಡೆದು, ದ್ವಿತೀಯ ವಾಣಿಜ್ಯ ವಿಭಾಗದ ಕುಮಾರಿ ಸಾಕ್ಷಿ ಶೆಟ್ಟಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಯ್ಕೆಯಾಗಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗಳ ತಂಡಕ್ಕೆ ದೈಹಿಕ ಶಿಕ್ಷಕಿ ಪ್ರಭಾವತಿ ಹೆಗ್ಡೆ ಮತ್ತು ಮುಖ್ಯ ತರಬೇತುದಾರ ಶಶಿಧರ್ ಶೆಟ್ಟಿ ತರಬೇತಿಯನ್ನು ನೀಡಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.
