
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಅಜೆಕಾರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ 35 ಕೆ.ಜಿ ಒಳಗಿನ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾದ ಶ್ರೀಫಲ್ ಸಂತೋಷ್ ಶೆಟ್ಟಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
17 ವರ್ಷ ವಯೋಮಿತಿಯ 35 ಕೆ.ಜಿ ಒಳಗಿನ ಪ್ರೌಢಶಾಲಾ ವಿಭಾಗದಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾದ ಕಾರ್ತಿಕ್ ಹಾಗೂ 40 ಕೆ.ಜಿ ಒಳಗಿನ ಪ್ರಾಥಮಿಕ ಶಾಲಾ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಯಾದ ಅವ್ನೀಶ್ ಬೆಳ್ಳಿಯ ಪದಕಗಳೊಂದಿಗೆ ದ್ವಿತೀಯ ಸ್ಥಾನವನ್ನುಪಡೆದಿರುತ್ತಾರೆ. ವಿಜೇತರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರಶೆಟ್ಟಿಯವರು ಅಭಿನಂದಿಸಿರುತ್ತಾರೆ.













