
ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.
ಉಡುಪಿ ಜಿಲ್ಲೆಯಲ್ಲಿ ಜೂ.21 ಅಪರಾಹ್ನ 1 ಗಂಟೆಯ ಹವಾಮಾನ ವರದಿಯಂತೆ ಜೂ.22 ಮತ್ತು ಜೂ.23 ಎರಡು ದಿನಗಳು ರೆಡ್ ಅಲರ್ಟ್ ಇದ್ದು, ಜೂ.24 ಮತ್ತು 25 ರ ವರೆಗೆ 2 ದಿನಗಳು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು/ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು/ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು/ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳುವುದು.
ಸಾರ್ವಜನಿಕರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬ/ಕಟ್ಟಡ/ ಮರಗಳ ಹತ್ತಿರ /ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪುವುದು.
ಹೆಚ್ಚಿನ ಮಾಹಿತಿಗಾಗಿ:08258 230201 ಕರೆಮಾಡಲು ಕಾರ್ಕಳ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ