
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಕರಾವಳಿ ಭಾಗದ ಜನ ಬೆಂಗಳೂರು, ಗೋವಾದತ್ತ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರಕಾರವು ಕರಾವಳಿ ಪ್ರವಾಸೋದ್ಯಮ ನೀತಿಯನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಮಾಹಿತಿ ನೀಡಿದ್ದಾರೆ.
ಕರಾವಳಿ ಭಾಗದ ಜನರು ಈಗಾಗಲೇ ತಮ್ಮ ಊರುಗಳನ್ನು ಬಿಟ್ಟು ನೆರೆ ರಾಜ್ಯಗಳಾದ ಗೋವಾ, ಕೇರಳ ಜೊತೆಗೆ ವಿದೇಶಕ್ಕೆ ತೆರಳುತ್ತಿದ್ದು ಹೀಗಾಗಿ ಈ ಕುರಿತು ಸಂಬಂಧಿಸಿದ ಶಾಸಕರು, ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅವರು ಕರಾವಳಿ ಪ್ರದೇಶದ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಕರಾವಳಿ ಕೈಗಾರಿಕೋದ್ಯಮ ನೀತಿಯನ್ನು ಜಾರಿಗೆ ತರಲು ಸರ್ಕಾರವು ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.



















