25.9 C
Udupi
Saturday, May 2, 2026
spot_img
spot_img
HomeBlogಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ : ADR ವರದಿ

ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ : ADR ವರದಿ

ನವದೆಹಲಿ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ ಎಂದು ವರದಿ ಬಿಡುಗಡೆ ಮಾಡಿದೆ.

ಎಡಿಆರ್ ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ ಗುರುವಾರ ವರದಿ ಬಿಡುಗಡೆ ಮಾಡಿದ್ದು 27 ವಿಧಾನಸಭೆಗಳು, 3 ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ 652 ಸಚಿವರ ಪೈಕಿ 643 ಸಚಿವರ ಅಫಿಡವಿಟ್‌ಗಳನ್ನು ವಿಶ್ಲೇಷಿಸಲಾಗಿದೆ. ಕರ್ನಾಟಕದಲ್ಲಿ ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರು ಇದ್ದಕ ಆಂಧ್ರ ಪ್ರದೇಶವು ನಂತರದ ಸ್ಥಾನದಲ್ಲಿದೆ.

643 ಸಚಿವರ ಪೈಕಿ 302 ಮಂದಿ (47%) ವಿರುದ್ಧ ಕ್ರಿಮಿನಲ್ ಪ್ರಕರಣಗಳಿದ್ದು 174 ಸಚಿವರ ವಿರುದ್ಧ (27%) ಗಂಭೀರ ಅಪರಾಧ ಪ್ರಕರಣಗಳಿವೆ. ಈ ಸಚಿವರು ಕೊಲೆ, ಕೊಲೆಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಸಂಪುಟದ 72ರಲ್ಲಿ 29 (40%) ಮಂದಿ ವಿರುದ್ಧ ಪ್ರಕರಣಗಳಿವೆ.

  • ಚಂದ್ರಶೇಖರ ಪೆಮ್ಮಸಾನಿ (ಕೇಂದ್ರ ಸಚಿವ) – ಟಿಡಿಪಿ – (ಗುಂಟೂರು ಸಂಸದ) – 5,705 ಕೋಟಿ
  • ಡಿ.ಕೆ. ಶಿವಕುಮಾರ್ – ಕಾಂಗ್ರೆಸ್ – ಕನಕಪುರ – 1,413 ಕೋಟಿ
  • ಚಂದ್ರಬಾಬು ನಾಯ್ಡು ನಾರಾ – ಟಿಡಿಪಿ – ಕುಪ್ಪಂ – 971 ಕೋಟಿ
  • ನಾರಾಯಣ ಪೊಂಗೂರು – ಟಿಪಿಡಿ – ನೆಲ್ಲೂರು – 824 ಕೋಟಿ
  • ಸುರೇಶ್ ಬಿ.ಎಸ್ – ಕಾಂಗ್ರೆಸ್ – ಹೆಬ್ಬಾಳ – 648 ಕೋಟಿ
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page