
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆ ನವಂಬರ್ 13ರಂದು ಉಪ ಚುನಾವಣೆ ನಡೆಯಲಿದೆ ಹಾಗೂ ಫಲಿತಾಂಶ ನವಂಬರ್ 23ರಂದು ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ಉಪಚುನಾವಣೆ ಕುರಿತು ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ 18ರಂದು ಹೊರಡಿಸಲಾಗುತ್ತದೆ ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ ಅಕ್ಟೋಬರ್ 28 ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಮಪತ್ರ ಹಿಂತೆ ತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.













